ಸುಳ್ಯ:ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ರಸ್ತೆಗೆ ರೂ. 1 ಕೋಟಿ ಅನುದಾನ ಬಿಡುಗಡೆ ಗೊಂಡಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿ. ಸಿ. ಜಯರಾಮ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರಕಾರದ
ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್. ಸಿ. ಮಹಾದೇವಪ್ಪರವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಲಾಗಿತ್ತು. ಮಾಜಿ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ರವರು ಹಾಗೂ ಮಾಜಿ ಸ್ಪೀಕರ್ ಹಾಲಿ ಉಸ್ತುವಾರಿ ಸಚಿವರಾದ ಯು. ಟಿ. ಖಾದರ್ರವರು ಅನುದಾನ ಬಿಡುಗಡೆ ಮಾಡುವಂತೆ ಶಿಫಾರಸ್ಸನ್ನು ಮಾಡಿದ್ದರು. ಅದರಂತೆ ವಿಶೇಷ ಅನುದಾನವನ್ನು ಮಂಜೂರಾತಿ ಮಾಡಿ ಆದೇಶಿಸಿರುತ್ತಾರೆ. ಈ ರಸ್ತೆಯ ಕಾಮಗಾರಿ ಶೀಘ್ರದಲ್ಲೇ ಆರಂಭ ಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.






