ಜೈಪುರ: ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಿಡಿಸಿದ ಅಜೇಯ ಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 183 ರನ್ ಭಾರಿಸಿದೆ. ಐಪಿಎಲ್ನಲ್ಲಿ ಕೊಹ್ಲಿ ಸಿಡಿಸಿದ 8ನೇ
ಶತಕ ಇದಾಗಿದೆ.ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಆಕರ್ಷಕ ಬ್ಯಾಟಿಂಗ್ನಿಂದ ಆರ್ಸಿಬಿ ರಾಜಸ್ತಾನ್ ರಾಯಲ್ಸ್ ಗೆಲುವಿಗೆ 184 ರನ್ ಗುರಿ ನೀಡಿದೆ.ಕೊಹ್ಲಿ 72 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ಗಳ ಸಹಾಯದಿಂದ ಅಜೇಯ 113 ರನ್ ಬಾರಿಸಿದರು. ನಾಯಕ ಎಫ್ಡು ಪ್ಲೆಸಿಸ್ ಹಾಗೂ ಕೊಹ್ಲಿ ಮೊದಲ ವಿಕೆಟ್ಗೆ 14 ಓವರ್ಗಳಲ್ಲಿ 125 ರನ್ ಜೊತೆಯಾಟ ನಡೆಸಿ ಆರ್ಸಿಬಿಗೆ ಭದ್ರ ಬುನಾದಿ ಹಾಕಿಕೊಟ್ಟರು. ಡುಪ್ಲೆಸಿಸ್ 33 ಎಸೆತಗಳಲ್ಲಿ ತಲಾ 2 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 44 ರನ್ ಬಾರಿಸಿದರು. ಮ್ಯಾಕ್ಸ್ವೆಲ್ 1, ಎಸ್.ಚೌಹಾನ್ 9 ಕ್ಯಾಮರೂನ್ ಗ್ರೀನ್ ಅಜೇಯ 5 ರನ್ ಗಳಿಸಿದರು.