ಮುಂಬೈ: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕಗಳ ಅರ್ಧಶತಕ ಸಾಧಿಸಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾರತದ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. ಈ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (49 ಶತಕ) ಅವರ ಹೆಸರಲ್ಲಿದ್ದ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದಿದ್ದಾರೆ.ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ
ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಅಸಾಮಾನ್ಯ ಸಾಧನೆ ಮಾಡಿದ್ದಾರೆ.ಇದೇ ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಶತಕ ಗಳಿಸದ್ದ ವಿರಾಟ್, ಸಚಿನ್ ಶತಕಗಳನ್ನು ಸರಿಗಟ್ಟಿದ್ದರು.
ಬುಧವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಕೊಹ್ಲಿ ಏಕದಿನ ಮಾದರಿಯಲ್ಲಿ 50 ನೇ ಶತಕ ದಾಖಲಿಸಿದರು. ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಚಿನ್ ತೆಂಡುಲ್ಕರ್ 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದಾರೆ. ಪ್ರಸ್ತುತ ಈ ದಾಖಲೆ ಮುರಿದ ವಿರಾಟ್ ಕೊಹ್ಲಿ 291 ಪಂದ್ಯಗಳಲ್ಲಿ 50 ಏಕದಿನ ಶತಕ ಸಿಡಿಸಿ ವಿಶ್ವಕಪ್ 2023 ನಲ್ಲಿ ತಮ್ಮ ಮೂರನೇ ಶತಕ ದಾಖಲಿಸಿದರು. ಕೊಹ್ಲಿ 291 ಪಂದ್ಯದಲ್ಲಿ 13,777 ರನ್ ಬಾರಿಸಿದ್ದಾರೆ.









