ಅಹಮ್ಮದಾಬಾದ್: ಐಪಿಎಲ್ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
ಇಂದು ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಬ್ಯಾಟಿಂಗ್ ಮಾಡಲು ಇಳಿದ ಆರ್ಸಿಬಿ ಪರ ತಂಡದ ಆರಂಭಿಕ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ
ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮೂಲಕ ಕೊಹ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ಕೊಹ್ಲಿ ಇನ್ನಿಂಗ್ಸ್ನಲ್ಲಿ 24 ಎಸೆತಗಳಲ್ಲಿ 33 ರನ್ ಬಾರಿಸಿ ಔಟಾದರು.
ಈ ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ.
ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ಸೀಸನ್ನಲ್ಲಿ 15 ಇನ್ನಿಂಗ್ಸ್ಗಳಲ್ಲಿ ಕೊಹ್ಲಿ 741 ರನ್ ಬಾರಿಸಿದ್ದಾರೆ.