ಮುಂಬೈ: ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಂಪತಿಗೆ ಗಂಡು ಮಗು ಜನಿಸಿದೆ.ಈ ವಿವರವನ್ನು ಸ್ವತಃ ವಿರಾಟ್ ಕೊಹ್ಲಿ ಅವರೇ ಸಾಮಾಜಿಕ ಮಾಧ್ಯಮಗಳ ಮೂಲಕ ಬಹಿರಂಗಪಡಿಸಿದ್ದಾರೆ. ಅಲ್ಲದೆ ಎರಡನೇ ಮಗುವಿನ
ಆಗಮನದ ಖುಷಿಯ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
‘ನಮ್ಮ ಹೃದಯ ಅತೀವ ಸಂತೋಷ ಹಾಗೂ ಪ್ರೀತಿಯಿಂದ ತುಂಬಿದೆ. ಫೆಬ್ರುವರಿ 15ರಂದು ನಾವು ವಮಿಕಾ ಅವರ ತಮ್ಮ ‘ಅಕಾಯ್’ರನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ತಿಳಿಸಲು ತುಂಬಾನೇ ಸಂತೋಷವಾಗುತ್ತಿದೆ. ಎಂದು ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ.