ಪುತ್ತೂರು: 2025 ಸೆಫ್ಟಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲಾದಲ್ಲಿ ಪಶು ವೈಧ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಅವರು ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಪಶು ಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು ಕೊಯಿಲಾ ಪಶು ವೈಧ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ
ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದೆ, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಗಿ ಸರಕಾರ ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ಒಂದು ವರ್ಷದೊಳಗೆ ಕಾಲೇಜು ಪ್ರಾರಂಭವಾಗಬೇಕು ಎಂದು ಶಾಸಕರು ಮನವಿ ಮಾಡಿದ್ದರು. ಮನವಿಗೆ ಸ್ಪಂದನೆ ನೀಡಿದ ಪಶುಸಂಗಹೋಪನಾ ಸಚಿವಾಲಯ ಈ ಬಗ್ಗೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಶಾಸಕರಿಗೆ ತಿಳಿಸಿದ್ದಾರೆ.
ಕೊಯಿಲಾದಲ್ಲಿರುವ ವಿಸ್ತಾರವಾದ ಜಾಗದಲ್ಲಿ ಪಶು ವೈಧ್ಯಕೀಯ ಕಾಲೇಜಿಗೆ ಪೂರಕವಾಗಿ ಇರಬೇಕಾದ ಅಗತ್ಯಕ್ರಮಗಳನ್ನು ಮಾಡಿಕೊಳ್ಳುವುದರ ಜೊತೆ ಹೊರ ಗುತ್ತಿಗೆ ಆಧಾರದಲ್ಲಿ ಸ್ಥಳದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶ ನೀಡುವಂತೆ ಶಾಸಕರು ಮನವಿ ಮಾಡಿದ್ದರು. ಈ ಮನವಿಗೆ ಇಲಾಖೆ ಸ್ಪಂದಿಸಿದ್ದು ಹೊರ ಗುತ್ತಿಗೆ ಆಧಾರದಲ್ಲಿ ಹಸು, ಕುರಿ ಮತ್ತು ಹಂದಿ ಸಾಕಾಣಿಕೆಗೆ ಅವಕಾಶವನ್ನು ಕಲ್ಪಿಸಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೊಯಿಲಾ ಜಾನುವಾರ ಕೇಂದ್ರದ ಕಟ್ಟಡದಲ್ಲಿ ಮುಂದಿನ ಒಂದು ವರ್ಷದೊಳಗೆ ಪಶು ವೈಧ್ಯಕೀಯ ಕಾಲೇಜು ಆರಂಭವಾಗವುದರೊಂದಿಗೆ ಈ ಭಾಗದ ಕನಸು ನನಸಾಗಲಿದೆ.ಅಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಸರಕಾರ ಮಾಡಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.