ಕೂಟೇಲು:ಶಕ್ತಿ ಫ್ರೆಂಡ್ಸ್ ಕ್ಲಬ್ ಕೂಟೇಲು, ರೋಟರಾಕ್ಟ್ ಕ್ಲಬ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಕೂಟೇಲು ಮದನ್ ಕ್ರೀಡಾಂಗಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸುಳ್ಯ ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಪುವೇಂದ್ರನ್ ಕೂಟೇಲು, ಕೂಟೇಲು ಶಕ್ತಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸುಂದರ ಪಾಂಡ್ಯನ್, ರೋಟರಾಕ್ಟ್ ಕ್ಲಬ್ನ ಮಾಜಿ ಅಧ್ಯಕ್ಷ ಭವಾನಿಶಂಕರ ಕಲ್ಮಡ್ಕ, ಶಕ್ತಿ ಫ್ರೆಂಡ್ಸ್ ಕ್ಲಬ್ ರಿ ಕೂಟೇಲು ಇದರ ಸದಸ್ಯರು ಭಾಗವಹಿಸಿದ್ದರು.