ಸುಳ್ಯ:ಸುಳ್ಯ ಜಯನಗರದ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಮೇ.17ರಂದು ನಡೆಯಲಿದೆ. ವಿಶೇಷ ಆಹ್ವಾನಿತರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಲಿದ್ದಾರೆ.
ಜಯನಗರ ಬೂತ್ ಸಮಿತಿ ಮತ್ತು ಭಾರತೀಯ ಜನತಾ ಪಾರ್ಟಿ ಸುಳ್ಯ ನಗರ ಮಹಾಶಕ್ತಿಕೇಂದ್ರದ ಸಹಯೋಗದೊಂದಿಗೆ ಕಾರಣಿಕ ಶ್ರೀಕ್ಷೇತ್ರ
ಕೋರಂಬಡ್ಕದಲ್ಲಿ ಸಂಕಲ್ಪ ಮಾಡಿಕೊಂಡಂತೆ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದ್ದು ಸಿದ್ಧತೆಗಳು ಭರದಿಂದ ಸಾಗಿದೆ. 3ನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಗಳಾಗಿ ಸರಕಾರ ನಡೆಸಬೇಕು ಎಂದು ಭಾರತೀಯ ಜನತಾ ಪಾರ್ಟಿ ಜಯನಗರ ಬೂತ್ ಸಮಿತಿಯವರು ಸಾನಿಧ್ಯದಲ್ಲಿ ಸಂಕಲ್ಪ ಮಾಡಿಕೊಂಡ ಹಿನ್ನಲೆಯಲ್ಲಿ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಗೆ ತಂಬಿಲ ಸೇವೆ ನಡೆಯಲಿದೆ.
ಶ್ರೀ ದೈವದ ಕರಿಗಂಧ ಪ್ರಸಾದವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಚೌಟರವರ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಲುಪಿಸಲಾಗುವುದು ಎಂದು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.

ನೇಮೋತ್ಸವದ ಅಂಗವಾಗಿ ಪೂ.11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ ವೀಜಯೇಂದ್ರ ಉದ್ಘಾಟಿಸುವರು.ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಬಿ.ಜೆ.ಪಿ ಕಾರ್ಯದರ್ಶಿಗಳು ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ,ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ನ.ಪಂ.ಅಧ್ಯಕ್ಷೆ ಶಶಿಕಲಾ ನೀರಬಿದಿರೆ,

ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ನೇಮೋತ್ಸವ ಸ್ವಾಗತ ಸಮಿತಿ ಸಂಚಾಲಕರಾದ ಎ.ಟಿ. ಕುಸುಮಾಧರ, ಪ್ರಧಾನ ಕಾರ್ಯದರ್ಶಿ, ಬಿಜೆಪಿ ಮಂಡಲ ಎಸ್ಸಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ನೇಮೋತ್ಸವ ನಿರ್ವಹಣಾ ಸಮಿತಿ ಸಂಚಾಲಕರಾದ ಜಿ. ಜಗನ್ನಾಥ ಜಯನಗರ,ಶ್ರೀ ಕ್ಷೇತ್ರ ಕೋರಂಬಡ್ಕದ ವ್ಯವಸ್ಥಾಪನ ಆಡಳಿತ ಕಾರ್ಯ ಸೇವಾ ಸಮಿತಿಯ ಅಧ್ಯಕ್ಷರಾದ
ಕೇಶವ ಸಿ ಎ. ಮತ್ತಿತರರು ಭಾಗವಹಿಸಲಿದ್ದಾರೆ.
ನೇಮೋತ್ಸವ ಕಾರ್ಯಕ್ರಮಗಳು:
ಮೇ.17 ಬೆಳಿಗ್ಗೆ 4.00ಕ್ಕೆ : ದೀಪಾರಾಧನೆ ನಾಗಬ್ರಹ್ಮ ದೇವರಿಗೆ ಪೂಜೆ
ಬೆಳಿಗ್ಗೆ 5.00ಕ್ಕೆ ಶ್ರೀ ಗುಳಿಗ ದೈವಕ್ಕೆ ಮತ್ತು ಶ್ರೀ ಮೋರ್ಗೇಕ್ರಳ ದೈವಕ್ಕೆ ತಂಬಿಲ ಸೇವೆ. ಬೆಳಿಗ್ಗೆ 5.30ಕ್ಕೆ
ಶ್ರೀ ಕೊರಗ ತನಿಯ ದೈವದ ನೇಮೋತ್ಸವ,ಬೆಳಿಗ್ಗೆ 11.00ಕ್ಕೆ
ಪ್ರಸಾದ ವಿರತಣೆ
ಬೆಳಿಗ್ಗೆ 11.30ಕ್ಕೆ ಸಭಾ ಕಾರ್ಯಕ್ರಮ ಅಪರಾಹ್ನ 1ಕ್ಕೆ
ಅನ್ನಸಂತರ್ಪಣೆ ನಡೆಯಲಿದೆ.
