ಕಡಬ:ಕಡಬ ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಕೋರಿಯಾರ್ ಎಂಬಲ್ಲಿ ಕುಮಾರಾಧಾರ ನದಿಗೆ ಸರ್ವಋತು ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖಾ ಮುಖಾಂತರ 30 ಕೋಟಿ ರೂ ಅನುದಾನ ಮಂಜೂರುಗೊಂಡಿಗೆ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಬುಧವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಸದರ ಆದರ್ಶ ಗ್ರಾಮ ಬಳ್ಪ ಹಾಗು
102ನೇ ನೆಕ್ಕಿಲಾಡಿ ಗ್ರಾಮವನ್ನು ಸಂಪರ್ಕಿಸುವ ಈ ಸೇತುವೆ ನಿರ್ಮಾಣವಾಗಬೇಕು ಎಂದು ಕಳೆದ ಹತ್ತಾರು ವರ್ಷಗಳಿಂದ ಈ ಭಾಗದ ಜನತೆಯ ಬಹುಕಾಲದ ಬೇಡಿಕೆಯಾಗಿದೆ. ಮಾಜಿ ಶಾಸಕ ಅಂಗಾರ ಅವರು ಕೋರಿಯಾರ್ನಲ್ಲಿ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿ ಸರಕಾರದ ಗಮನ ಸೆಳೆದಿದ್ದರು.ನಾನು ಶಾಸಕಿಯಾದ ಬಳಿಕ ಮತ್ತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಈ ಹಿಂದಿನ ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೆ ಈಗ ಸರಕಾರ ಅನುದಾನ ಮಂಜೂರು ಮಾಡಿದೆ, ಇದಕ್ಕಾಗಿ ಸಚಿವರು ಹಾಗೂ ಸರಕಾರಕ್ಕೆ ಅಭಿನಂದೆ ಸಲ್ಲಿಸುತ್ತೇನೆ ಎಂದು ಹೇಳಿದ ಶಾಸಕರು ಕೋರಿಯಾರ್ ನಲ್ಲಿ ಬೃಹತ್ ಸೇತುವೆ ನಿರ್ಮಾಣವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಮೇದಪ್ಪ ಗೌಡ ಡೆಪ್ಪುಣಿ, ಪ್ರದೀಪ್ ರೈ ಮನವಳಿಕೆ, ಗಣೇಶ್ ಉದನಡ್ಕ, ಹರ್ಷಿತ್ ಕಾರ್ಜಾ, ಧರ್ಮಪಾಲ ಕಣ್ಕಲ್, ವಿನೋದ್ ಬೋಳ್ಮಳೆ, ಪ್ರಕಾಶ್ ಎನ್.ಕೆ., ಸುರೇಶ್ ದೇಂತಾರು, ಅಶೋಕ್ ಕುಮಾರ್ ಪಿ., ಸತೀಶ್ ಕರ್ಮೆಣ, ದೇವರಾಜ್ ಕೊಠಾರಿ, ಅಭಿಲಾಷ್ ಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.







