ಮಂಗಳೂರು: ಉಳ್ಳಾಲ ಕೋಟೆಕಾರು ವ್ಯವಸಾಯ ಸಹಕಾರಿ ಸಂಘದಲ್ಲಿ ನಡೆದ ಕೋಟ್ಯಂತರ ರೂ.ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ತಮಿಳುನಾಡಿನಲ್ಲಿ
ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ದರೋಡೆಗೆ ಬಳಸಿದ ಕಾರು, ಮಾರಕಾಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಶುಕ್ರವಾರ ಮಧ್ಯಾಹ್ನ ಸಹಕಾರಿ ಸಂಘದಿಂದ ದರೋಡೆ ಮಾಡಿ ತಮಿಳುನಾಡುವಿಗೆ ಆರೋಪಿಗಳು ಪರಾರಿಯಾಗಿದ್ದರು. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಂಕ್ ದರೋಡೆ ಬೇಧಿಸಿದ ಪೊಲೀಸ್ ಇಲಾಖೆಯನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.