ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಮಹಿಳೆಯೂ ಮೃತಪಟ್ಟಿದ್ದಾರೆ. ಇದರಿಂದ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿದೆ. ಅಪಘಾತದಲ್ಲಿ
ಸ್ಕೂಟಿ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸ್ಕೂಟಿಯಲ್ಲಿದ್ದ ಸಹ ಸವಾರೆ ಮಹಿಳೆ ಗಂಭೀರ ಗಾಯಗೊಂಡಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಲಾಗಿದ್ದರೂ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಹಾಗೂ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದೆ.