ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಓರ್ವರು ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸ್ಕೂಟಿ ಸವಾರ ಮೃತಪಟ್ಟಿದ್ದಾರೆ.ಸ್ಕೂಟಿಯಲ್ಲಿದ್ದ
ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಹಾಗೂ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.