ಸಂಪಾಜೆ:ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾಗಿ ನೇಮಕಗೊಂಡ ಕಾರ್ಮಿಕ ಮುಖಂಡ ಕೆ.ಪಿ.ಜಾನಿ ಅವರನ್ನು ದ.ಕ. ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಅಧ್ಯಕ್ಷತೆ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್
ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ ಕೆ.ಪಿ.ಜಾನಿಯವರನ್ನು ಅಭಿನಂದನಾ ಭಾಷಣ ಮಾಡಿದರು.ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ಸೂರಜ್ ಹೊಸೂರು,
ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಮೊಯ್ದಿನ್ ಕುಂಞ ಕೊಯನಾಡು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಜ್ಞಾನಶೀಲನ್ ನೆಲ್ಲಿಕುಮೇರಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಎಸ್.ಯಮುನಾ ಮಾತನಾಡಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ ಕಲ್ಲುಗುಂಡಿ, ಚೆಂಬು ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಸುಶೀಲ ನಾಯ್ಕ್, ಚೆಂಬು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಕುಸುಮಾವತಿ, ಸದಸ್ಯರಾದ ಗಿರೀಶ್, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಎಚ್.ಎ.ಹಮೀದ್, ಸಂಪಾಜೆ ವಲಯ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀಧರ್ ಕಡೆಪಾಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್ ಸ್ವಾಗತಿಸಿ, ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕ ವಂದಿಸಿದರು.