ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋ ಜಕರಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಇವರನ್ನು ನೇಮಕಾತಿ ಮಾಡಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಆದೇಶ ಹೊರಡಿಸಿರುತ್ತಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸುಳ್ಯ
ವಿಧಾನ ಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಯಾಗಿ ತೊಡಗಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ
ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಯಾಗಿರುವ ಎಸ್. ಸಂಶುದ್ದೀನ್ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ,ರಾಜ್ಯ ಅಲ್ಪಸಂಖ್ಯಾತರ ವಿಭಾಗ ಕಾರ್ಯದರ್ಶಿಯಾಗಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯರಾಗಿ, ದ. ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ