ಸುಳ್ಯ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ಅವರನ್ನು ಎಐಸಿಸಿ ನೇಮಕ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕೆಪಿಸಿಸಿಗೆ ನೂತನ ಪದಾಧಿಕಾರಿಗಳ
ನೇಮಕ ಮಾಡಿ ಆದೇಶ ಮಾಡಲಾಗಿದೆ. ಸುಳ್ಯ ಅರಂತೋಡಿನವರಾದ ಶಹೀದ್ ಎನ್ಎಸ್ಯು ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯದರ್ಶಿ, ಕೆಪಿಸಿಸಿ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ನಾರು ಮಂಡಳಿ ಸದಸ್ಯರಾಗಿದ್ದರು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ವಕ್ಫ್ ಕೌನ್ಸಿಲ್ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕೆಪಿಸಿಸಿ ಕಾರ್ಯದರ್ಶಿಯಾಗಿ ಕೊಡಗು ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು
ತೆಕ್ಕಿಲ್ ಮನೆತನದವರಾದ ಶಹೀದ್ ತೆಕ್ಕಿಲ್ ಮೊಹಮ್ಮದ್ ಹಾಜಿಯವರ ಮೊಮ್ಮೊಗ. ತೆಕ್ಕಿಲ್ ಬಾಬಾ ಹಾಜಿಯವರ ಪುತ್ರ. ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರು.ಗೂನಡ್ಕದ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ. ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿದ್ದಾರೆ. 2002ರಲ್ಲಿ ರಾಜ್ಯ ಯುವ ಪ್ರಶಸ್ತಿ ವಿಜೇತರಾಗಿದ್ದರು