ಸುಳ್ಯ:ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಅವರನ್ನು

ಚಂದ್ರಕಲಾ ಪ್ರಸನ್ನ.
ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ.ಸುಳ್ಯ ವಿಧಾನ ಸಭಾ ಕ್ಷೆತ್ರದ ಕೆ.ಪಿ.ಸಿ.ಸಿ ಉಸ್ತುವಾರಿಯಾಗಿ ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಳಚೆ ನಿರ್ಮೂಲನ ಮತ್ತು ಒಳಚರಂಡಿ ಮಂಡಳಿಯ ಮಾಜಿ ಅಧ್ಯಕ್ಷೆ ಚಂದ್ರಕಲಾ ಪ್ರಸನ್ನರವರನ್ನು ನೇಮಕಗೊಂಡಿರುತ್ತಾರೆ.
ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ ಪಕ್ಷ ಬಲವರ್ಧನೆಗೆ ಕಾರ್ಯಚಟುವಟಿಕೆಗಳನ್ನು ಡಿ.ಸಿ.ಸಿ,ಬಿ.ಸಿ.ಸಿ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಸೂಚಿಸಲಾಗಿದೆ.