ಬೆಂಗಳೂರು:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ನೂತನ ತಂಡದ ಪದಾಧಿಕಾರಿಗಳ ಪಟ್ಟಿಯನ್ನು ಎಐಸಿಸಿ ಪ್ರಕಟಿಸಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ
ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದೆ. ಇನ್ನು ಕೆಪಿಸಿಸಿ ಖಜಾಂಚಿಯಾಗಿ ವಿನಯ್ ಕಾರ್ತಿಕ್ ಅವರನ್ನೇ ಮುಂದುವರೆಸಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕ ಮಾಡಿದ್ದರೆ.
ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖರು ಸ್ಥಾನ ಪಡೆದಿದ್ದಾರೆ.ಕೆಪಿಸಿಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೆ.ಅಭಯಚಂದ್ರ ಜೈನ್ ಹಾಗೂ ಐವನ್ ಡಿಸೋಜಾ ಅವರಿಗೆ ಸ್ಥಾನ ನೀಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ಟಿ.ಎಂ.ಶಹೀದ್ ತೆಕ್ಕಿಲ್, ರಕ್ಷಿತ್ ಶಿವರಾಂ, ಮಿಥುನ್ ರೈ, ಇನಾಯತ್ ಅಲಿ, ಎಂ.ಎಸ್.ಮಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ.