ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹೈಕಮಾಂಡ್ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ. ಈ ಕುರಿತು
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಪ್ರಕಟಣೆ ಹೊರಡಿಸಿದೆ.ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಒಪ್ಪಿಗೆಯ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಖಾಲಿಯಾಗಿದ್ದ ಕೆಪಿಸಿಸಿ ಸಾರಥ್ಯವನ್ನು ಹಿರಿಯ ನಾಯಕ ಹರಿಪ್ರಸಾದ್ ಅವರಿಗೆ ವಹಿಸಲಾಗಿದೆ.














