ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾಗಿ ಶೌವಾದ್ ಗೂನಡ್ಕರವರನ್ನು ನೇಮಕಗೊಳಿಸಿvಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನಾ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ಅವರು ಆದೇಶಿಸಿದ್ದಾರೆ.
ಚುನಾವಣೆಯ ಹಿನ್ನಲೆಯಲ್ಲಿ ಕೆಪಿಸಿಸಿಗೆ ನೂತನ ವಕ್ತಾರರನ್ನು
ನೇಮಕ ಮಾಡಲಾಗಿದೆ. 21 ಮಂದಿ ಮುಖ್ಯ ವಕ್ತಾರರು, 36 ಮಂದಿ ವಕ್ತಾರರು ಹಾಗೂ 5 ಮಂದಿ ಮಾಧ್ಯಮ ಸಂಯೋಜಕರನ್ನು ನೇಮಕ ಮಾಡಲಾಗಿದೆ. ಈ ಹಿಂದೆಯೂ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ಶೌವಾದ್ ಗೂನಡ್ಕ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ.ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸುಳ್ಯದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.









