ಬೆಳ್ಳಾರೆ: ಕೆಪಿಎಸ್ ಬೆಳ್ಳಾರೆಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿಭಾಗದ ನೂತನ ಕೊಠಡಿಗಳಿಗೆ ಸಿಆರ್ ಎಸ್ ಅನುದಾನ 63ಲಕ್ಷದ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಟ್ಟಡಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.ಕೆಪಿಎಸ್ ಆಗಿ ಮೇಲ್ದರ್ಜೆಗೆ ಏರಿದ ಬಳಿಕ ಅತೀ ಹೆಚ್ಚಿನ ವಿಧ್ಯಾರ್ಥಿಗಳು ಅಧ್ಯಯನ ನಡೆಸುವ
ಶಾಲೆಯಾದ ಕೆಪಿಎಸ್ ಬೆಳ್ಳಾರೆಗೆ ಮೂಲಭೂತ ಸೌಕರ್ಯ ಒದಗಿಸಲು ಹೆಚ್ಚಿನ ಅನುದಾನ ತರಲು ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಗ್ರಾಮ ಪಂಚಾಯತಿ ಅಧ್ಯಕ್ಷೆ ನಮಿತ ರೈ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹರ್ಷ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರಾಜೀವಿ ರೈ,ಕಾಲೇಜು ಪ್ರಾಂಶುಪಾಲರು,ಉಪ ಪ್ರಾಂಶುಪಾಲರು,ವಿದ್ಯಾರ್ಥಿಗಳ ಪೋಷಕರು,ಊರವರು ಉಪಸ್ಥಿತರಿದ್ದರು.





