ಸುಳ್ಯ: ಮಡಿಕೇರಿಯ ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯರಾದ ಹೆಚ್.ಎಂ. ನಂದಕುಮಾರ್ ಅವರು ಸುಳ್ಯದ ಕೊಯಿಕುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ(ಟ್ರ್ಯಾಕ್ ಪ್ಯಾಂಟ್)ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕೊಯಿಕುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ
ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿದರು.ಹೆಚ್.ಎಂ.ನಂದಕುಮಾರ್ ಅವರು ಕಳೆದ ಹಲವು ವರ್ಷಗಳಿಂದ ತಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜಕ್ಕೆ ನೀಡುತ್ತಾರೆ.ಕಷ್ಟದಲ್ಲಿ ಇರುವವರಿಗೆ ನೆರವಾಗುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ನೀಡಿರುವುದು. ಶ್ಲಾಘನೀಯ.ಹೃದಯ ಶ್ರೀಮಂತಿಕೆ ಇದ್ದರೆ ಮಾತ್ರ ಇಂತಹ ಸೇವಾ ಮನೋಭಾವದ ಮೂಲಕ ಜನರ ಪ್ರೀತಿ ಮತ್ತು ವಿಶ್ವಾಸ ಗಳಿಸಲು ಸಾಧ್ಯ ಎಂದು ಹೇಳಿದರು.ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಾಮಕೃಷ್ಣ ಭಟ್ ವಹಿಸಿದ್ದರು.ವೇದಿಕೆಯಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಸಂಶುದ್ದಿನ್, ಪ್ರಮುಖರಾದ ಗೋಕುಲ್ ದಾಸ್, ಭವಾನಿಶಂಕರ ಕಲ್ಮಡ್ಕ, ತೀರ್ಥರಾಮ ಕೊಯಿಕುಳಿ, ಶಂಬಯ್ಯ ಪಾರೆ, ಚೇತನ್ ಕಜೆಗದ್ದೆ, ಚಂದ್ರನ್ ಕೂಟೇಲು, ಶಹೀದ್ ಪಾರೆ, ನಾರಾಯಣ ಟೈಲರ್, ಭಾಗೀಶ್ ಕೆ.ಟಿ., ವಾರಿಜ ಕೊರಗಪ್ಪ, ಶೈಲಜಾ ನೀರಬಿದಿರೆ, ಜಯಂತ್ ಕೊಯಿಕುಳಿ, ಮಂಜುನಾಥ ಮಡ್ತಿಲ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರು, ಎಸ್ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲೆಯ ಮುಖ್ಯಶಿಕ್ಷಕ ಬೆಳ್ಯಪ್ಪ ಗೌಡ ಕೊಡ್ತುಗುಳಿ ಸ್ವಾಗತಿಸಿ, ವಂದಿಸಿದರು. ಕುರಲ್ ತುಳು ಕೂಟದ ಅಧ್ಯಕ್ಷ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.

















