ಐವರ್ನಾಡು: ಐವರ್ನಾಡು ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ವಿದ್ಯುತ್ ವ್ಯತ್ಯಯ ಸಮಸ್ಯೆ ತೀವ್ರಗೊಂಡಿದ್ದು, ರೈತರು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನವಿಡೀ ಹಲವು ಬಾರಿ ವಿದ್ಯುತ್ ಕಡಿತವಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗಿದೆ. ಆದುದರಿಂದ
ವಿದ್ಯುತ್ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷಿಕರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.ರಾತ್ರಿ ವೇಳೆ ವಿದ್ಯುತ್ ಇಲ್ಲದ ಕಾರಣ ನೀರಾವರಿ ಪಂಪ್ಸೆಟ್ಗಳು ಸ್ಥಗಿತಗೊಂಡು ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗದ ರೈತರು ಅತಂಕಗೊಂಡಿದ್ದಾರೆ. ಪವರ್ಮೆನ್ಗಳ ಕೊರತೆ ವಿದ್ಯುತ್ ಸಮಸ್ಯೆ ಪರುಹರಿಸಲು ಸಮಸ್ಯೆಯಾಗಿದೆ. ಆದುದರಿಂದ ಕೂಡಲೇ ಪವರ್ಮೆನ್ಗಳ ನೇಮಕ ಮಾಡಬೇಕು, ಗ್ಯಾಂಗ್ ಆಪರೇಟಿಂಗ್ ಸ್ವಿಚ್ ಅಳವಡಿಸಿ ವಿದ್ಯುತ್ ಸಂಪರ್ಕವನ್ನು ಸುಭದ್ರಪಡಿಸಬೇಕು ಎಂದು ಕೃಷಿಕರ ವೇದಿಕೆ ಸಂಚಾಲಕ ಕೃಷ್ಣಪ್ರಸಾದ್ ಮಡ್ತಿಲ ಆಗ್ರಹಿಸಿದ್ದಾರೆ. ಒಂದು ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದಲ್ಲಿ ಕೃಷಿಕರ ವೇದಿಕೆ ವತಿಯಿಂದ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು
ಕೃಷ್ಣಪ್ರಸಾದ್ ಮಡ್ತಿಲ ತಿಳಿಸಿದ್ದಾರೆ









