ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು ಹಾಗೂ ನಂದಗೋಕುಲ ಚಿಣ್ಣರ ಅಂಗಳ ಇದರ ಇದರ ಸಂಯುಕ್ತ ಆಶ್ರಯದಲ್ಲಿ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಆ.10 ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಯಿಂದ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯು
ಎರಡು ವಿಭಾಗದಲ್ಲಿ ನಡೆಯಲಿದ್ದು, 1ವರ್ಷದಿಂದ 03ವರ್ಷದೊಳಗಿನ ಮಕ್ಕಳು ಹಾಗೂ 3ವರ್ಷದಿಂದ 6ವರ್ಷದೊಳಗಿನ ಮಕ್ಕಳಿಗೆ ಸ್ಪರ್ಧೆ ಆಯೋಜನೆಗೊಂಡಿದೆ.

ಪ್ರಥಮ ಬಹುಮಾನವಾಗಿ ರೂ3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ.1000 ನೀಡಲಾಗುವುದು. ಅಲ್ಲದೇ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಗುವುದು. ಎರಡೂ ವಿಭಾಗಗಳಿಗೂ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುತ್ತದೆ, ಸ್ಪರ್ಧೆಗೆ ಹಾಜರಾಗುವ ಸಂದರ್ಭದಲ್ಲಿ ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಒಂದು ಭಾವಚಿತ್ರ ಕಡ್ಡಾಯವಾಗಿ ತರತಕ್ಕದ್ದು, ಹೆಸರನ್ನು ಈ ಕೆಳಗಿನ ಸಂಖ್ಯೆಗೆ ದಿನಾಂಕ 07.08.2025 ರ ಒಳಗಡೆ ಕರೆಯ ಮೂಲಕ ನೋಂದಾಯಿಸಲು ಪ್ರಕಟಣೆ ತಿಳಿಸಿದೆ.ಹೆಚ್ಚಿನ ಮಾಹಿತಿ ಮತ್ತು ಹೆಸರನ್ನು ನೋಂದಾಯಿಸಲು ಕರೆಮಾಡಬಹುದು : 8105556656, 8590773486





