ಸುಳ್ಯ: ಜಿಲ್ಲಾ ಪಂಚಾಯತ್ ಮಂಗಳೂರು ಕೃಷಿ ಇಲಾಖೆ ಸುಳ್ಯ ಇದರ ನೇತೃತ್ವದಲ್ಲಿ ರೈತಬಾಂಧವರಿಗೆ ಧನ್ ಧಾನ್ಯ ಕೃಷಿ ಯೋಜನೆ ಮೂಲಕ ಕೃಷಿ ಪರಿಯೋಜನೆ ಅರ್ಪಣೆ ಕಾರ್ಯಕ್ರಮವು ಶನಿವಾರ ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕೃಷಿಕ ಸಮಾಜದ ಅಧ್ಯಕ್ಷ ಎ.ಟಿ. ಕುಸುಮಾಧರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮುಂದೆ ತಾಲೂಕಿನಲ್ಲಿ
ಅತೀ ಹೆಚ್ಚಿನ ಅಹಾರ ಉತ್ಪನ್ನಗಳನ್ನು ಬೆಳೆಯಲು ಎಲ್ಲಾ ಸಹಕಾರಿ ಸಂಘ ಮತ್ತು ಸ್ಥಳೀಯ ಸಂಸ್ಥೆಗಳು ತೊಡಗಿಕೊಳ್ಳಬೇಕು ಎಂದು ಹೇಳಿದರು.
ರೈತ ಉತ್ಪಾದಕ ಕಂಪನಿ ಸುಳ್ಯ ಇದರ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಕೃಷಿಕ ಸಮಾಜದ ಜಿಲ್ಲಾ ಉಪಾಧ್ಯಕ್ಷ ಚಂದ್ರ ಕೋಲ್ಚಾರ್ , ಕೃಷಿ ಇಲಾಖಾ ಜೆಡಿ ಶಿವಶಂಕರ್ ದಾನಗೊಂಡರ್ , ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಎಂ ಎಸ್ , ಪಟ್ಟಣ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಎಂ ಎಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು , ಕಾರ್ಯನಿರ್ವಾಹಣಾದಿಕಾರಿಗಳು ,ರಸ ಗೊಬ್ಬರ ಮಾರಾಟ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.















