ಸುಳ್ಯ:ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸುಳ್ಯ ತಾಲೂಕು ಕೃಷಿಕ ಸಮಾಜದ ಮುಂದಿನ 5 ಬರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ನಾಳೆ (ಡಿ.31)ರಂದು ನಡೆಯಲಿದೆ.2025-26 ರಿಂದ 2029-30ನೇ ಸಾಲಿಗೆ 5 ವರ್ಷಗಳ ಅವಧಿಗೆ
ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಜಿ ಹಾಗೂ ಜಿಲ್ಲಾ ಪ್ರತಿನಿಧಿಗಳ ಆಯ್ಕೆ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ. ಪೂ.11ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಕೃಷಿಕ ಸಮಾಜದ 15 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ಅವಿರೋಧವಾಗಿ ಆಯ್ಕೆ ನಡೆದಿತ್ತು. ಪದಾಧಿಕಾರಿಗಳ ಆಯ್ಮೆಯೂ ಅವಿರೋಧವಾಗಿ ಆಯ್ಕೆ ನಡೆಯುವ ಸಾಧ್ಯತೆ ಇದೆ.