ಸುಳ್ಯ: ಸಚಿವರ ಭೇಟಿ ಮತ್ತು ಕಾರ್ಯಕ್ರಮದ ಬಗ್ಗೆ ಸರಿಯಾಗಿ ಮಾಹಿತಿ ನೀಡದೆ ತನ್ನನ್ನು ಕಡೆಗಣಿಸಿದ್ದಾರೆ ಎಂದು ಸಾರ್ವಜನಿಕ ವೇದಿಕೆಯಲ್ಲಿ ಸಚಿವರ ಎದುರಿನಲ್ಲಿಯೇ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅಸಮಾಧಾನ ಹೊರ ಹಾಕಿದ ಘಟನೆ ನಡೆಯಿತು. ಸುಳ್ಯ ಪರಿವಾರಕಾನದ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ
ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲಿ ಅವರು ಅಮಸಾಧಾನ ಹೊರ ಹಾಕಿದ ಪ್ರಸಂಗ ನಡೆಯಿತು. ಸಚಿವ ದಿನೇಶ್ ಗುಂಡೂರಾವ್ ಅವರು ಸುಳ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ತಾರಂಟಿ ಸಮಾವೇಶಕ್ಕೆ ಮುನ್ನ ಅಜ್ಜಾವರ ಅಡ್ಪಂಗಾಯ ಶಾಲಾ ಕೊಠಡಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಜಿ.ಕೃಷ್ಣಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು .ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಂಗ್ರೆಸ್ ಮುಖಂಡರು ಮತ್ತಿತರರು ಸೇರಿ ಕೃಷ್ಣಪ್ಪ ಅವರನ್ನು ಸಮಾಧಾನ ಪಡಿಸಿದರು.














