ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ಸುಳ್ಯ ತಾಲೂಕಿನ ಅರಂತೋಡು, ತೊಡಿಕಾನ ಭಾಗದಲ್ಲಿ ಪ್ರವಾಸ ಮಾಡಿ ಚುನಾವಣಾ ಪ್ರಚಾರ ಕೈಗೊಂಡರು. ಕಾಂಗ್ರೆಸ್ ಮುಖಂಡರು, ನಾಯಕರ, ಕಾರ್ಯಕರ್ತರ ಹಾಗು ಮತದಾರರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಮತದಾರರನ್ನು ಭೇಟಿ ಮಾಡಿ
ಮತ ಯಾಚನೆ ಮಾಡಿದರು. ದೇವಸ್ಥಾನ, ದೈವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಅರಂತೋಡು ಕೊಡಂಕೇರಿ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ನಡೆಸಿದರು. ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಶ್ರೀ ದುರ್ಗಾಮಾತಾ ಭಜನಾ ಮಂಡಳಿಯ ಅಧ್ಯಕ್ಷ ಕೆ ಆರ್ ಪದ್ಮನಾಭ, ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ
ಅವರ ಮನೆಗೆ ಭೇಟಿ ನೀಡಿದರು. ಅರಂತೋಡು ಕೊಡಂಕೇರಿಗೆ ಭೇಟಿ ನೀಡಿ ಪ್ರಚಾರ ನಡೆಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರ ಟಿ ಎಂ ಶಹೀದ್, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷ ಕೀರ್ತನ್ ಕೊಡಪಾಲ ಜೊತೆಗಿದ್ದರು. ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.