ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ಸುಳ್ಯ ನಗರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡರರು. ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕುಂಞಿಪಳ್ಳಿ ಸೇರಿ ಹಿರಿಯ ಕಾಂಗ್ರೆಸ್
ಮುಖಂಡರ, ನಾಯಕರ, ಕಾರ್ಯಕರ್ತರ ಹಾಗು ಮತದಾರರ ಮನೆಗೆ ತೆರಳಿ ಮಾತುಕತೆ ನಡೆಸಿದರು. ಮತದಾರರನ್ನು ಭೇಟಿ ಮಾಡಿ ಮತ ಯಾಚನೆ ಮಾಡಿದರು. ಕೆಪಿಸಿಸಿ ವಕ್ತಾರರಾದ ಟಿ.ಎಂ.ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ತಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಎನ್ಎಸ್ಯುಐ ಅಧ್ಯಕ್ಷ ಕೀರ್ತನ್ ಕೊಡಪಾಲ ಮತ್ತಿತರರು ಕೃಷ್ಣಪ್ಪ ಅವರ ಜೊತೆ ಇದ್ದರು.