ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಿದ ಎಲ್ಲಾ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಯಶಸ್ವಿಯಾಗಿ ಚುನಾವಣೆಯನ್ನು ನಡೆಸಿದ ಎಲ್ಲಾ ಅಧಿಕಾರಿಗಳಿಗೆ, ಸೂಕ್ತ ಭದ್ರತೆ ಒದಗಿಸಿದ ಪೊಲೀಸ್ ಅಧಿಕಾರಿಗಳಿಗೆ, ಭದ್ರತಾ ಸಿಬ್ಬಂದಿಗಳಿಗೆ, ಸಹಕರಿಸಿದ ಎಲ್ಲಾ ಮಾಧ್ಯಮ ಸ್ನೇಹಿತರಿಗೆ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವಿರತವಾಗಿ ಶ್ರಮಿಸಿದ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.