ಸುಳ್ಯ:ಕಡಬ ತಾಲೂಕಿನ ಐತೂರು ಗ್ರಾಮದ ನೇಲ್ಯಡ್ಕದಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದ ಸ್ಥಳಕ್ಕೆ ಕೆಪಿಸಿಸಿ ಸದಸ್ಯರು ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸಗ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ಭೇಟಿ ನೀಡಿದರು. ಆನೆ ಧಾಳಿಗೊಳಗಾದ
ಚೋಮ ನೆಲ್ಯಡ್ಕ ಅವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದರು. ಸರ್ಕಾರದ ಮಟ್ಟದಲ್ಲಿ ಸಿಗುವ ಎಲ್ಲಾ ಪರಿಹಾರವನ್ನು ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು. ಈ ಸಂಧರ್ಭ ದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಐತೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯ ನಾಯಕರು, ಗ್ರಾಮಸ್ಥರು ಉಪಸ್ಥಿತರಿದ್ದರು.