ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ವಿವಿಧ ಕಡೆಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಪಡ್ದಡ್ಕ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಗೆಲುವಿನ ವಿಶ್ವಾಸ ಇದೆ. ಎಲ್ಲಾ ಕಾರ್ಯಕರ್ತರು, ಮತದಾರರು ಸಹಕಾರ ನೀಡಬೇಕು. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆ ಮನೆ ತಲುಪಿಸಿ ಪ್ರಚಾರ ನಡೆಸಿ ಎಂದು ವಿನಂತಿಸಿದರು. ಇಚ್ಲಂಪಾಡಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು ಕಾಲೋನಿಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಕಾಂಗ್ರೆಸ್ ಮುಖಂಡರು ಜೊತೆಯಲ್ಲಿದ್ದರು.