ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಗಣೇಶ್ ಎಂ. (ಸುದೀಶ)
ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ
ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಕೆಆರ್‌ಎಸ್ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅವಿನಾಶ್ ಕಾರಿಂಜ, ಪುತ್ತೂರು ಕ್ಷೇತ್ರದ ಅಭ್ಯರ್ಥಿ ಐವನ್ ಫೆರಾವೊ, ಸಂದೀಪ್ ರೈ, ನವೀನ್ ಫೆರಾವೊ, ಸುಚೇತ್ ಕಾರಿಂಜ,ವಿಕ್ಟರ್ ಫೆರಾವೊ ಉಪಸ್ಥಿತರಿದ್ದರು.