ಸುಳ್ಯ: ಎರಡು ಅವಧಿಯಲ್ಲಿ ನಗರ ಪಂಚಾಯತ್ ಸದಸ್ಯರಾಗಿ ಜನ ಮನ್ನಣೆ ಗಳಿಸಿರುವ ಕೆ.ಎಸ್.ಉಮ್ಮರ್ ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿ ನಗರ ಪಂಚಾಯತ್ ಸದಸ್ಯರಾದ ಕೆ.ಎಸ್.ಉಮ್ಮರ್ ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಂಡಿದ್ದರು. ಈ ಹಿಂದೆಯೇ ಅವರಿಗೆ ಕಾಂಗ್ರೆಸ್ ಸೇರಲು
ಆಹ್ವಾನ ಬಂದಿದ್ದರೂ ಅವರು ಆಸಕ್ತಿ ವಹಿಸಲಿಲ್ಲ. ಇದೀಗ ಕಾಂಗ್ರೆಸ್ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸುಳ್ಯದ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುವ ದಿನದಂದು ನಾನು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದೇನೆ ಎಂದು ಅವರು ಹೇಳಿದ್ದಾರೆ. ಜಾತ್ಯಾತೀತ ನಿಲುವಿನಲ್ಲಿ ಇರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಒಪ್ಪುವಂತದ್ದು ಶಾಂತಿ ಮತ್ತು ಸೌಹಾರ್ದಯುಕ್ತ ಭಾರತಕ್ಕಾಗಿ ಈ ಚುನಾವಣೆಯಲ್ಲಿ ಎಲ್ಲರೂ ಒಂದಾಗಬೇಕಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಎಲ್ಲಾ ಪ್ರಯತ್ನ ನಡೆಸಬೇಕಾಗಿದೆ. ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಟ್ಟಾಗಬೇಕಾಗಿದೆ. ಆದುದರಿಂದ ಕಾಂಗ್ರೆಸ್ ಸೇರಲು ನಿರ್ಧರಿಸುವುದಾಗಿ ಉಮ್ಮರ್ ತಿಳಿಸಿದ್ದಾರೆ.