ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮುಂದುವರಿದಿದೆ. ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 5 ಮತ್ತು 6 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಭಾರೀ
ಮಳೆ ಮುಂದುವರಿಯು ವ ಸೂಚನೆ ಹಿನ್ನಲೆಯಲ್ಲಿ ನಾಳೆಯೂ (ಜುಲೈ 5) ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಇಂಪಶೇಖರ್ ಆದೇಶ ಹೊರಡಿಸಿದ್ದಾರೆ. ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದ್ದು ಸ್ಟೇಟ್,
ಸಿಬಿಎಸ್ಇ, ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಗಳು ಇತ್ಯಾದಿಗಳಿಗೆ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.