ಧರ್ಮಸ್ಥಳ: ಲಕ್ಷಾಂತರ ಮಂದಿ ಸರ್ವಧರ್ಮಿಯರ ಶ್ರದ್ಧಾ-ಭಕ್ತಿಯ ಕೇಂದ್ರವಾದ ಧರ್ಮಸ್ಥಳವು ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಮಾದರಿಯಾಗಿ ಪ್ರೇರಕ ಶಕ್ತಿಯಾಗಿದ್ದು, ಅತಿಶಯ ಕ್ಷೇತ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ಕಾಸರಗೋಡು ಎಡನೀರು ಮಠದ ಪೂಜ್ಯ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.ಅವರು ಸೋಮವಾರ ಧರ್ಮಸ್ಥಳಕ್ಕೆ
ಕೊಂಡೆವೂರು ಮಠದ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಣ್ಣೂರು ಚಿಮೇನಿ ನಿತ್ಯಾನಂದ ಮಠದ ಅವಧೂತ ವಿನು ಸ್ವಾಮೀಜಿ ಹಾಗೂ ತಮ್ಮ ಭಕ್ತರೊಂದಿಗೆ ಕ್ಷೇತ್ರ ರಕ್ಷಾಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿ ಸಂದರ್ಭದಲ್ಲಿ ಸ್ವಾಗತಿಸಲಾಯಿತು.ದೇವರ ದರ್ಶನದ ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಅವರನ್ನು ಡಿ. ಹರ್ಷೇಂದ್ರ ಕುಮಾರ್ ಗೌರವಿಸಿದರು.
ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು.ನಂತರ ಪ್ರವಚನ ಮಂಟಪದಲ್ಲಿ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಆಶೀರ್ವಚನ ನೀಡಿದರು. ಧಾರ್ಮಿಕ ಶ್ರದ್ಧಾಕೇಂದ್ರಗಳ ರಕ್ಷಣೆ ಭಕ್ತರ ಕರ್ತವ್ಯ ಹಾಗೂ ಹೊಣೆಗಾರಿಕೆಯಾಗಿದೆ ಎಂದರು.ಡಿ. ಹರ್ಷೇಂದ್ರ ಕುಮಾರ್ ಮಾತನಾಡಿದರು.
ಕೊಂಡೆವೂರು ಮಠದ ಯೋಗಾನಂದ ಸರಸ್ವತಿ ಸ್ವಾಮೀಜಿ ಮತ್ತು ಕಣ್ಣೂರು ಚಿಮೇನಿ ನಿತ್ಯಾನಂದ ಮಠದ ಅವಧೂತ ವಿನು ಸ್ವಾಮೀಜಿ ಉಪಸ್ಥಿತರಿದ್ದರು.ಶ್ರೀನಿವಾಸ ರಾವ್ ಧರ್ಮಸ್ಥಳ
ಸ್ವಾಗತಿಸಿ ವಂದಿಸಿದರು.












