ಸುಳ್ಯ:ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕುಶಾಲನಗರ ಮೂಲದ ಮಹಿಳೆ ಭಾರತಿ(50) ಮೃತಪಟ್ಟವರು.ಎರಡು ಬಸ್ಗಳಲ್ಲಿದ್ದ ಒಟ್ಟು
26 ಮಂದಿ ಗಾಯಗೊಂಡಿದ್ದಾರೆ. 19 ಮಂದಿ ಗಾಯಾಳುಗಳು ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಮತ್ತು 7 ಮಂದಿ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಂಭಿರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಮಡಿಕೇರಿ ಭಾಗದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ.
ಅರಂತೋಡು ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ವಿವಿಧ ಕಡೆಗಳಿಂದ ಆಗಮಿಸಿದ ಆಂಬುಲೆನ್ಸ್ಗಳ ಮೂಲಕ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತು.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಅಪಘಾತದ ಬಳಿಕ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಪೊಲೀಸರು ಆಗಮಿಸಿ ಬಸ್ಗಳನ್ನು ತೆರವು ಮಾಡಿ ವಾಹನ ಸಂಚಾರವನ್ನು ಸರಿಪಡಿಸಿದರು.