ಸುಳ್ಯ: ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರಿದು ಹೋದ ಆಸನದ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಎನ್ ಎಸ್ ಯು ಐ ವತಿಯಿಂದ ಕೆಎಸ್ಆರ್ಟಿಸಿ ಡಿಪ್ಪೋ ಮೇನೇಜರ್ ಗೆ ಮನವಿ ಸಲ್ಲಿಸಲಾಯಿತು.
ಸುಳ್ಯ ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ಕೊರತೆ ಎದ್ದು ಕಾಣುತ್ತದೆ. ಕಳೆದ ಹಲವಾರು
ತಿಂಗಳುಗಳಿಂದ ಪ್ರಯಾಣಿಕರು ಕುಳಿತುಕೊಳ್ಳವ ಆಸನಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ತಮ್ಮ ಬಳಿ ಇರುವ ಲಗೇಜು ಮತ್ತು ಸಣ್ಣ ಪುಟ್ಟ ಮಕ್ಕಳನ್ನು ಗಂಟೆ ಗಟ್ಟಲೆ ನಿಲ್ಲಿಸಿ ಬಸ್ಸನ್ನು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಮಾತ್ರವಲ್ಲದೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.
ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಆಸನಗಳ ಸಂಖ್ಯೆಯನ್ನು ಹೆಚ್ಚಿಸುವ ಹಾಗೂ ಸರಿಪಡಿಸಿವ ವ್ಯವಸ್ಥೆಯನ್ನು ಕೂಡಲೇ ಮಾಡಬೇಕೆಂದು ಮನವಿಯಲ್ಲಿ ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶಹಾಲ್ ಕೆ.ಎಸ್ ಉಪಸ್ಥಿತರಿದ್ದರು.