ಮಂಗಳೂರು: ಸುಳ್ಯದ ಸಂಘಟಕ ಕೆ.ಟಿ.ವಿಶ್ವನಾಥ ಸೇರಿ ವೈಯುಕ್ತಿಕ ವಿಭಾಗದಲ್ಲಿ 46 ಮಂದಿಗೆ ಹಾಗೂ 17 ಸಂಸ್ಥೆಗಳಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನ.1ರಂದು ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರದಾನ ಮಾಡಿದರು. ಸಮಾಜ ಸೇವಾ ವಿಭಾಗದಲ್ಲಿ ಕೆ.ಟಿ.ವಿಶ್ವನಾಥ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.
ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್, ಮನಪಾ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ದ.ಕ. ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿ.ಪಂ. ಸಿಇಒ ಡಾ. ಆನಂದ್, ಮನಪಾ ಆಯುಕ್ತ ಆನಂದ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಭಾಗವಹಿಸಿದ್ದರು.
ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಸದಾನಂದ ಮಾವಜಿ ಮತ್ತಿತರರು ಉಪಸ್ಥಿತರಿದ್ದರು.









