ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡಮಿ ಆಫ್
ಲಿಬರಲ್ ಎಜ್ಯುಕೇಷನ್ ‘ಕಮಿಟಿ ಬಿ’ ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ
ಡಾ. ಕೆ.ವಿ ರೇಣುಕಾಪ್ರಸಾದ್ ಅವರು ಬೆಳ್ಳಿ ರಥ ಸಮರ್ಪಣೆ ಮಾಡಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಜೂ.14 ರಂದು ನಡೆಯಲಿದೆ. ಅಂದು ಬೆಳಿಗ್ಗೆ
ದೇವಾಲಯದಲ್ಲಿ ಶಾಸ್ತ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಲಿದೆ. ನಂತರ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್ ರೈ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಡಾ. ರೇಣುಕಾ ಪ್ರಸಾದ್ ಕೆ.ವಿ.ಹಾಗೂ ಕುಟುಂಬಸ್ಥರು, ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಮೋಹನ್ ರಾಮ್ ಸುಳ್ಳಿ, ರಥಶಿಲ್ಪಿ ರಾಜಗೋಪಾಲ್ ಆಚಾರ್ , ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ