ಸುಬ್ರಹ್ಮಣ್ಯ:ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಿಸಿದ ಬೆಳ್ಳಿ ರಥದಲ್ಲಿ ಸುಬ್ರಹ್ಮಣ್ಯ ದೇವರ ರಥೋತ್ಸವ

ಸೋಮವಾರ ರಾತ್ರಿ ನಡೆಯಿತು. ರಥದಾನಿ ಡಾ.ಕೆ.ವಿ.ರೇಣುಕಾಪ್ರಸಾದ್ ಅವರು ನೂತನ ರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ ಬೆಳ್ಳಿರಥೋತ್ಸವ ಸೇವೆ ನೆರವೇರಿಸಿದರು. ಭಕ್ತಿ ಸಂಭ್ರಮದಿಂದ ನಡೆದ ರಥೋತ್ಸವ ವೀಕ್ಷಿಸಲು ಸಾವಿರಾರು ಭಕ್ತರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ.
ಪತ್ನಿ ಡಾ.ಜ್ಯೋತಿ ರೇಣುಕಾಪ್, ಪುತ್ರ ಮೌರ್ಯ ಆರ್ ಕುರುಂಜಿ, ಪುತ್ರಿ ಡಾ.ಅಭಿಜ್ಞಾ, ಅಳಿಯ ಗೋಕುಲ್, ಕುಟುಂಬ ವರ್ಗದವರು. ಶಿಕ್ಷಣ ಸಂಸ್ಥೆಗಳ ಪ್ರಮುಖರು, ಉದ್ಯೋಗಿಗಳು, ಹಲವು ವಿದ್ಯಾರ್ಥಿಗಳು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದರು.












