ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂಭ್ರಮ.ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ವೈಭವದ ಬ್ರಹ್ಮ ರಥೋತ್ಸವ ನಡೆಯಿತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಮಂದಿ ಭಕ್ತರು ರಥೋತ್ಸವವವನ್ನು ಕಣ್ತುಂಬಿಕೊಂಡರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ
ಚಂಪಾಷಷ್ಠಿ ಜಾತ್ರಾ ಮಹೋತ್ಸವದ
ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಸೋಮವಾರ ಪ್ರಾತಃಕಾಲ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದ ಬಳಿಕ ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ನೆರವೇರಿತು. ಬಳಿಕ ಭಕ್ತಿ ಸಂಭ್ರಮದಲ್ಲಿ ವೈಭವದ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು.ಕೊಂಬು ಕಹಳೆ, ಚೆಂಡೆ, ವಾದ್ಯ ಘೋಷಗಳು, ಸಾವಿರಾರು ಭಕ್ತರ ಕಂಠದಿಂದ
ಹೊರಬಂದ ಜಯ ಘೋಷಗಳ ಮಧ್ಯೆ ರಥೋತ್ಸವ ನಡೆಯಿತು. ದೇವಳಧ ಆನೆ ಯಶಸ್ವಿ ರಥೋತ್ಸವಕ್ಕೆ ಸಾಥ್ ನೀಡಿತು.ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನಡೆಯಿತು.
ಕುಕ್ಕೆ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ ವೀಕ್ಷಿಸಲು ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು ಕ್ಷೇತ್ರದ ತುಂಬೆಲ್ಲ ಭಕ್ತ ಸಾಗರವೇ ಕಂಡು ಬರುತ್ತಿತ್ತು.ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು.