ಸುಬ್ರಹ್ಮಣ್ಯ: ಕಲೆಯನ್ನು ನಮ್ಮ ಬದುಕಿನ ಭಾಗವಾಗಿ ಇರಿಸಿಕೊಳ್ಳುವುದು ಅತ್ಯಗತ್ಯ.ಕಲೆಯು ಜೀವನಕ್ಕೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೋಧಿಸುತ್ತದೆ. ಎಳವೆಯಲ್ಲಿಯೇ ಕಲೆಯನ್ನು ಬೆಳೆಸಿಕೊಂಡರೆ ಶಿಸ್ತುಬದ್ದ ಜೀವನ ನಡೆಸಲು ಪೂರಕವಾಗುತ್ತದೆ.ಕಲೆಯು ಆತ್ಮವಿಶ್ವಾಸ ಮತ್ತು ಶಿಸ್ತುತಮ ಜೀವನ ನಡೆಸಲು ಪ್ರೇರಣೆ ನೀಡುತ್ತದೆ ಎಂದು ಪುತ್ತೂರಿನ ನಾಟ್ಯರಂಗ ಪುತ್ತೂರುನ ನೃತ್ಯಗುರು ಮತ್ತು
ಕಾಲೇಜಿನ ಹಿರಿಯ ವಿದ್ಯಾರ್ಥಿನಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್.ಆರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ
ದಿನೇಶ್ ಶಿರಾಡಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಕ್ಷಯ್ ಕಂದಡ್ಕ, ಉಪಾಧ್ಯಕ್ಷೆ ಪ್ರೀಕ್ಷಾ, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿದ್ಯಾಲಕ್ಷ್ಮೀ, ಕ್ರೀಡಾಕಾರ್ಯದರ್ಶಿ ಅಜಿತ್ ಜೋಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿದ್ಯಾರ್ಥಿ ಗಗನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಅನನ್ಯಾ ಭಟ್ ಪರಿಚಯಿಸಿದರು. ವಿದ್ಯಾರ್ಥಿ ಚಿನ್ಮಯ್ ವಂದಿಸಿದರು. ವಿದ್ಯಾರ್ಥಿನಿ ಮೋಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.