ಸುಬ್ರಹ್ಮಣ್ಯ:ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ಶ್ರೀ ದೇವಳದ
ಪ್ರಧಾನ ಅರ್ಚಕರ ನಿರ್ದೇಶನದಂತೆ ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ.ಅಲ್ಲದೆ ಈ ದಿನ ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.