ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ಕಾಡಾನೆಯೊಂದು ಕಂಡು ಬಂದಿದ್ದು ಆತಂಕ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಕಾಡಾನೆ ಅರಣ್ಯದೊಳಗೆ ಸೇರಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈಗಾಗಲೇ
ಸ್ಥಳೀಯರು ಹಾಗೂ ನಮ್ಮ ಸಿಬ್ಬಂದಿ ನೀಡಿದ ಮಾಹಿತಿ ಪ್ರಕಾರ ಕಾಡಾನೆ ಹತ್ತಿರದ ಅರಣ್ಯ ಪ್ರದೇಶಕ್ಕೆ ಮರಳಿದೆ. ಅರಣ್ಯ ಇಲಾಖೆಯ ರಾತ್ರಿ ಗಸ್ತಿನ ಸಿಬ್ಬಂದಿ
ನಿಯೋಜಿಸಲಾಗಿದೆ. ಕಾಡಾನೆ ಮೇಲೆ ನಿಗಾ ಇಡಲು ಅರಣ್ಯ ಇಲಾಖೆ ತಂಡ ರಚಿಸಿದೆ. ಕಾಡಾನೆ ಕಂಡುಬಂದಲ್ಲಿ ಸಾರ್ವಜನಿಕರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಪುತ್ತೂರು ಸಹಾಯಕ ಆಯುಕ್ತ, ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಅಲ್ಲದೇ ದೇಗುಲದ ಮೈಕ್ ಪಾಯಿಂಟ್ ನಿಂದ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗುತ್ತಿದೆ. ಸ್ಥಳೀಯರು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ