ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಡಿ.22ರಿಂದ 26ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲುದೆ.ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿದೀಪ ಬೆಳಗಿಸಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅಧ್ಯಕ್ಷತೆ ವಹಿಸಿದ್ದರು.ರಥಬೀದಿಯ
ನೂತನ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗುರುಬಸವ ಮಹಾಮನೆ ಚನ್ನಯನಗಿರಿಯ ಶ್ರೀ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.ವೇದಿಕೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ

ಅಶೋಕ್ ನೆಕ್ರಾಜೆ, ಡಾ. ರಘು, ಪ್ರವೀಣ ರೈ ಮರುವಂಜ, ಲೀಲಾ ಮನಮೋಹನ್, ಸೌಮ್ಯ, ಅಜಿತ್ ಕುಮಾರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಪವನ್ ಕುಮಾರ್ ಎಂ.ಡಿ, ಕಡಬ ತಾಲ್ಲೂಕು ಕೆಡಿಪಿ ಸದಸ್ಯ ಶಿವರಾಮ ರೈ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
















