ಬೆಂಗಳೂರು:ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಮಗ್ರ ಅಭಿವೃದ್ದಿಯ ‘ಮಾಸ್ಟರ್ ಪ್ಲಾನ್’ ಯೋಜನೆಯ ಮೇಲ್ವಿಚಾರಣಾ ಸಮಿತಿಯ ಸಭೆ ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಕಛೇರಿಯಲ್ಲಿ ನಡೆಯಿತು.ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದಲ್ಲಿ ನಡೆಸಬೇಕಾದ ವಿವಿಧ
ಅಭಿವೃದ್ಧಿ ಕಾರ್ಯಕ್ರಮಗಳ ಚರ್ಚೆ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಇಲಾಖೆಯ ಆಯುಕ್ತರು, ಅಧಿಕಾರಿಗಳು, ಇಂಜಿನಿಯರ್ ಗಳು,ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು. ದೇವಸ್ಥಾನದ ಸುತ್ತು ಪೌಳಿ ಗೋಪುರ ನಿರ್ಮಾಣ, ವಸತಿ ಗೃಹಗಳ ನಿರ್ಮಾಣ, 3 ಸಾವಿರ ಮಂದಿಗೆ

ಒಮ್ಮೆಗೆ ಕುಳಿತುಕೊಂಡು ಊಟ ಮಾಡಬಹುದಾದ ಅನ್ನದಾನ ಛತ್ರ, ಪಾರ್ಕಿಂಗ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯಿತು. ಕೂಡಲೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ರೂಪುರೇಷೆ ತಯಾರಿಸಿ ನೀಡುವಂತೆ ಸಚಿವರು ಸೂಚಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು ಸಲಹೆ ಸೂಚನೆಗಳನ್ನು ನೀಡಿದರು. ಶಾಸಕರ ಹಾಗೂ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರ ಗಮನಕ್ಕೆ ತಂದು ಅಭಿವೃದ್ಧಿ ಕಾರ್ಯಗಳ ರೂಪುರೇಷೆ ತಯಾರಿಸುವಂತೆ ಸಚಿವರು ಸೂಚಿಸಿದರು.