ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಬ್ರಮಣ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಆರಂಭಿಸಲು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಠಡಿ ಒದಗಿಸುವಂತೆ ಸಾರಿಗೆ ಹಾಗೂ
ಧಾರ್ಮಿಕ ದತ್ತಿ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮನವಿಗೆ ಕೂಡಲೇ ಸ್ಪಂದಿಸಿದ ಸಚಿವ ರಾಮಲಿಂಗ ರೆಡ್ಡಿ ಅವರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಕಾರ್ಯಾಚರಿಸಲು ಕೊಠಡಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.ಈ ವೇಳೆ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್ ಉಪಸ್ಥಿತರಿದ್ದರು.





