ಸುಳ್ಯ:ರಾಜ್ಯದ ನಂ.1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಆಯ್ಕೆ ಮಾಡಲು ಜಿಲ್ಲಾ ಕಾಂಗ್ರೆಸ್ ನೇತೃತ್ವ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಮೇ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು
ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದಸ್ಯರು ಸಭೆ ನಡೆಸಿ ಅಧ್ಯಕ್ಷರ ಅಧಿಕೃತ ಆಯ್ಕೆ ನಡೆಸಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿದು ಬಂದಿದೆ. ಆಧ್ಯಕ್ಷತೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಮುಖಂಡರು ಸಭೆ ನಡೆಸಿ ಮಾತುಕತೆ ನಡೆಸಿ ಅಧ್ಯಕ್ಷತೆ ವಿಚಾರದಲ್ಲಿ ಸಮನ್ವತೆ ಸಾಧಿಸಿದ ಬಳಿಕ ಮಹೇಶ್ ಕುಮಾರ್ ಅವರನ್ನು ಅಧ್ಯಕ್ಷತೆಗೆ ಆಯ್ಕೆ ಮಾಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ. ನೂತನ ಸದಸ್ಯರು ಹಾಗೂ ಅಧ್ಯಕ್ಷರು ಸೋಮವಾರ ಅಧಿಕಾರ ವಹಿಸಿಕೊಳ್ಳಲಾಗುವುದು ಎಂದು ಮಹೇಶ್ ಕುಮಾರ್ ಕರಿಕ್ಕಳ ಅವರು ಖಚಿತಪಡಿಸಿದ್ದಾರೆ.
ಡಾ.ಬಿ.ರಘು, ಅಶೋಕ್ ನೆಕ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಹರೀಶ್ ಇಂಜಾಡಿ, ಲೀಲಾ ಮನಮೋಹನ, ಪ್ರವೀಣ ಮರುವಂಜ, ಸೌಮ್ಯ ಭರತ್, ಅಜಿತ್ ಅವರು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಮಹೇಶ್ಕುಮಾರ್ ಕರಿಕ್ಕಳ ಈ ಹಿಂದೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.