ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಎಸ್ಎಸ್ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ 8ನೇ ತರಗತಿಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಮತ್ತು ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾಲಯಕ್ಕೆ ಭವ್ಯವಾಗಿ ಸ್ವಾಗತಿಸಲಾಯಿತು.ವಿದ್ಯಾಲಯದ ಪ್ರವೇಶ ದ್ವಾರವನ್ನು ತಳಿರು ತೋರಣಗಳಿಂದ ಸಿಂಗರಿಸಿ ಅಲಂಕರಿಸಲಾಗಿದ್ದು ಇಲ್ಲಿಂದ
ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನ, ಪುಷ್ಪವೃಷ್ಠಿಯ ಮೂಲಕ ವಿದ್ಯಾಲಯಕ್ಕೆ ಕರೆದೊಯ್ಯಲಾಯಿತು.ಅಲ್ಲದೆ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಲಲಿತಾ.ಜಿ.ಗುಂಡಡ್ಕ, ಪ್ರೌಢಶಾಲಾ ವಿಭಾಗದ ಮುಖ್ಯಗುರು ಕೆ.ಯಶವಂತ ರೈ, ಭೌತಶಾಸ್ತ್ರ ಉಪನ್ಯಾಸಕ ಗಿರೀಶ್, ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ, ಶಿಕ್ಷಕರಾದ ಸುರೇಶ್, ಸತೀಶ್, ನಂದಾ, ಸ್ಮಿತಾ, ರಘು ಬಿಜೂರು, ಚೇತಾಕ್ಷಿ, ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಪೋಷಕರು ಉಪಸ್ಥಿತರಿದ್ದರು. ಬಳಿಕ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು.