ಮಸ್ಸೂರಿ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕುಲದೀಪ್ ಯಾದವ್ ತಮ್ಮ ಬಾಲ್ಯದ ಗೆಳತಿ ವಂಶಿಕಾ ಚಡ್ಡಾ ಜೊತೆ ಶನಿವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಟೀಮ್ ಇಂಡಿಯಾದ ‘ಚೈನಾಮನ್’ ಖ್ಯಾತಿಯ ಸ್ಪಿನ್ನರ್ ಕುಲದೀಪ್ ಯಾದವ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಉತ್ತರಾಖಂಡದ
ಮಸ್ಸೂರಿಯ ಸುಂದರ ಬೆಟ್ಟಗಳ ನಡುವೆ ತಮ್ಮ ಬಾಲ್ಯದ ಗೆಳತಿ ವಂಶಿಕಾ ಚಡ್ಡಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.ಉತ್ತರಾಖಂಡದ ಪ್ರಸಿದ್ಧ ಗಿರಿಧಾಮವಾದ ಮಸ್ಸೂರಿಯ ಹೋಟೆಲ್ ಸೆವೊಯ್ನಲ್ಲಿ ಈ ವಿವಾಹ ಕಾರ್ಯಕ್ರಮ ನೆರವೇರಿದ್ದು, ರಾತ್ರಿ 8 ಗಂಟೆಯ ಸುಮಾರಿಗೆ ಸಾಂಪ್ರದಾಯಿಕ ಏಳು ಹೆಜ್ಜೆಗಳನ್ನು ಇಡುವ ಮೂಲಕ ಮದುವೆ ಶಾಸ್ತ್ರ ಸಂಪನ್ನಗೊಂಡಿದೆ. ಹಲವು ಮಂದಿ ಕ್ರಿಕೆಟಿಗರು ಹಳದಿ ಹಾಗೂ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.












